ಔಷಧ ನಿಯಂತ್ರಣ ಅಧಿಕಾರಿಗಳ ಜತೆಗೆ ಆರೋಗ್ಯ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ರವರು ಸಭೆ ನಡೆಸಿದರು. ಇಲಾಖೆಯ ಪ್ರಧಾನ ಕಾರ್ಯದರ್ಶಿ ಶ್ರೀ ಹರ್ಷ ಗುಪ್ತ ಉಪಸ್ಥಿತರಿದ್ದರು. ‘ರಾಜ್ಯದಲ್ಲಿ ಉತ್ಪಾದನೆಯಾಗುವ ಔಷಧಗಳು ಸೇರಿದಂತೆ ಸರ್ಕಾರಿ ಔಷಧ ಮಳಿಗೆಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಬೇಕು’ ಎಂದು ಆರೋಗ್ಯ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ರವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.